Sunday, July 24, 2011

ನುಡಿಮುತ್ತು

ಉತ್ತಮ ಗುರೂ ತನ್ನ ಶಿಷ್ಯರಿಂದಲೇ ಕಂಡು ಹಿಡಿಯಲ್ಪಡುತ್ತಾನೆ. ಯಾವ ಶಿಷ್ಯ ಗುರುವಿಗಿಂತ ಮುಂದೆ ಹೋಗುತ್ತಾನೋ ಅವನೇ ಉತ್ತಮ ಗುರು.
— ವಿನೋಬಾ ಭಾವೆ

ಹಸಿವು ಒಂದು ರೋಗ ಎಂದು ತಿಳಿದುಕೋ. ಭಿಕ್ಷೆ ದೊರಕಿದುದನ್ನು ಔಷಢ ಎಂದು ಸೇವಿಸು. ಸಿಹಿಯನ್ನು ಬೇಡದಿರು. ದೊರೆತುದುದನ್ನು ಸೇವಿಸು. ರೋಗಕ್ಕೆ ಎಷ್ಟು ಪ್ರಮಾಣದ ಔಷಧ ಬೇಕೋ ಅಷ್ಟೇ ಆಹಾರ ಸೇವಿಸು. ಹೆಚ್ಚಲ್ಲ ಕಡಿಮೆಯಲ್ಲ.
— ಶಂಕರಾಚಾರ್ಯರು

"ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ. ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.... "
— ಕುವೆಂಪು ('ಕನ್ನಡ ದೀಕ್ಷೆ)

ಯಾರ ಯೋಗ್ಯತೆಯನ್ನು ಅವರ ಲೋಪಗಳ ಆಧಾರದ ಮೇಲೆ ನಿರ್ಣಯಿಸಬಾರದು.
ಕೈನಿಂದ ಕೆಲಸವಾಗಲಿ ಮತ್ತು ಹೃದಯದಲ್ಲಿ ಭಕ್ತಿ ಇರಲಿ
— ವಿನೋಬಾ ಭಾವೆ

ಭಕ್ತಿಯ ಉಗಮ ಭೀತಿಯಿಂದಲ್ಲ ಪ್ರೀತಿಯಿಂದ ಆಯಿತು. ಮನುಷ್ಯನಿಗೆ ಭೀತಿ ಎಷ್ಟು ಸ್ವಾಭಾವಿಕವೋ, ಪ್ರೀತಿ ಅದಕ್ಕಿಂತ ಹೆಚ್ಚು ಸ್ವಾಭಾವಿಕ. ಮನುಷ್ಯನಿಗೆ ಭೀತಿಗಿಂತ ಮೊದಲು ಪ್ರೀತಿಯ ಅನುಭವವಾಗುತ್ತದೆ.
— ವಿನೋಬಾ ಭಾವೆ

ಕೊನೆಯಲ್ಲಿ ನಮ್ಮ ನೆನಪಿಗುಳಿಯುವುದು ನಮ್ಮ ಶತ್ರುಗಳ ಮಾತಲ್ಲ, ನಮ್ಮ ಮಿತ್ರರ ಮೌನ.
— ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್

ನಿನ್ನ ದೊಡ್ಡ ನೆರಳನ್ನು ನೋಡಿ ಹೆದರುವ ಅಥವಾ ಭಯ ಪಡುವ ಕಾರಣವಿಲ್ಲ. ಅದು ನಿನ್ನ ಗುಲಾಮ. ನಿನ್ನ ಆಜ್ಞೆಯಂತೆ ನಡೆಯುತ್ತದೆ. ನೀನು ನಿಂತರೆ ಅದೂ ನಿಲ್ಲುವುದು, ನೀನು ಕುಳಿತರೆ ಅದೂ ಕುಳಿತುಕೊಳ್ಳುವುದು.
— ವಿನೋಬಾ ಭಾವೆ

No comments:

Post a Comment